ಚಿಕ್ಕಬಳ್ಳಾಪುರ : ಯುವತಿ ಮೇಲೆ ಆ್ಯಸಿಡ್ ಎರಚಿ ಬೆಂಕಿ ಹಚ್ಚಿಕೊಂಡಿದ್ದ ಸೋದರ ಮಾವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮದುವೆಗೆ ನಿರಾಕರಿಸಿದ ಯುವತಿ ಮೇಲೆ ಸೋದರ ಮಾವನಿಂದಲೇ ಆಸಿಡ್ ದಾಳಿ ನಡೆದಿತ್ತು, ಬಳಿಕ ಸೋದರ ಮಾವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸೋದರ ಮಾವ ಮೃತಪಟ್ಟಿದ್ದಾನೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ನಿವಾಸಿ ಆನಂದಕುಮಾರ್ ಯುವತಿ ಮನೆ ಎದುರಲ್ಲೇ ಆಸಿಡ್ ದಾಳಿ ಮಾಡಿದ್ದನು. ನಂತರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು. ಯುವತಿಯ ಮನೆ ಎದುರು ಆತ್ಮಹತ್ಯೆಗೆ ಯತ್ನಿಸಿದ ಸೋದರ ಮಾವ ಆನಂದಕುಮಾರ್ ಸ್ಥಿತಿ ಗಂಭೀರವಾಗಿತ್ತು, ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆನಂದ್ ಮೃತಪಟ್ಟಿದ್ದಾನೆ. ಅದೃಷ್ಟವಶಾತ್ ವೈಶಾಲಿ(19) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

