ಬೆಂಗಳೂರು : ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರನ್ನು 6 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಉಗ್ರ ಟಿ ನಾಸಿರ್ ಗೆ ನೆರವು ನೀಡಿದ ಆರೋಪದ ಮೇರೆಗೆ ಇಂದು ಎನ್ ಐ ಎ (NIA) ಬೆಂಗಗಳೂರು ಸೇರಿ 5 ಕಡೆ ದಾಳಿ ನಡೆಸಿ ಮೂವರನ್ನು ಬಂಧಿಸಿತ್ತು. ಬಂಧಿತರನ್ನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್ ಐ ಎ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮೂವರನ್ನು 6 ದಿನಗಳ ಕಾಲ ಎನ್ ಐ ಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದಡಿ ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಯ ಐದು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್, ಉತ್ತರ ವಿಭಾಗದ ನಗರ ಶಶಸ್ತ್ರ ಮೀಸಲು ಪಡೆ ಎಎಸ್ಐ ಚಾಂದ್ ಪಾಷಾ ಮತ್ತು ತಲೆ ಮರೆಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಅಹಮದ್ ತಾಯಿ ಅನೀಸ್ ಫಾತಿಮಾ ಅವರನ್ನು ಬಂಧಿಸಲಾಗಿದೆ.ಉಗ್ರರ ಚಟುವಟಿಕೆ ಸಂಬಂಧಿಸಿದ ಹಣ, ಚಿನ್ನಾಭರಣ, ಎರಡು ವಾಕಿ ಟಾಕಿ ಇತರೆ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ.