ಮಂಡ್ಯ: ಮಹಿಳಾ ಪಿಸಿ ಹಾಗೂ ಮಹಿಳೆಯ ನಡುವೆ ಹೊಡೆದಾಟ ನಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.
ಕಾರ್ಮಿಕ ಸಂಘಟನೆಗಳ ಸದಸ್ಯರ ಪ್ರತಿಭಟನೆ ನಡುವೆ ಮಹಿಳಾ ಪಿಸಿ ಹಾಗೂ ಮಹಿಳೆ ಹೊಡೆದಾಡಿಕೊಂಡಿದ್ದಾರೆ. ವಿವಿಧ ಬೇಡಿಕೆಗಳ ಈಡೆರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಮಿಕರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
ಈ ವೇಳೆ ಮಹಿಳಾ ಪಿಸಿ ಹಾಗೂ ಮಹಿಳೆಯ ನಡುವೆ ವಾಗ್ವಾದ ನಡೆದು, ಜಟಾಪಟಿ ನಡೆದಿದೆ. ಈ ವೇಳೆ ಮಹಿಳಾ ಪಿಸಿಯನ್ನು ತಳ್ಳಿ ಆಕ್ರೋಶ ವ್ಯಕ್ತಪಡಿಸಿದ ಮಹಿಳೆ ಮಹಿಳಾ ಕಾನ್ಸ್ಟೇಬಲ್ ಕೊರಳಪಟ್ಟಿ ಹಿಡಿದುಕೊಂಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಹೊಡೆದಾಟ ನಡೆದಿದೆ. ಕೆಲ ಕಾಲ ಸ್ಥಳದಲ್ಲಿ ಹೈಡ್ರಾಮಾ ನಡೆದಿದೆ.