ರಾಮನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಒಂದೇ ಸಮನೆ ಹೆಚ್ಚುತ್ತಿದೆ. ರಾಮನಗರದಲ್ಲಿ ಮತ್ತೋರ್ವ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಗೊಲ್ಲರದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ಗಿರೀಶ್ (25) ಮೃತ ದುರ್ದೈವಿ. ದನ ಮೇಯಿಸಲು ತೆರಳಿದ್ದಾಗ ಗಿರೀಶ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕಳೆದ ಮೂರು ದಿನಗಳಿಂದ ಗಿರೀಶ್ ಗೆ ಎದೆನೋವು ಕಾಣಿಸಿಕೊಂಡಿತ್ತು. ಇದೀಗ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.