ನವದೆಹಲಿ: ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೈಸೂರು ದಸರಾದಲ್ಲಿ ಏರ್ ಶೋ ಆಯೋಜಿಸಲು ರಕ್ಷಣಾ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದರು. ಈ ಮೂಲಕ ಈ ಬಾರಿ ಮೈಸೂರು ದಸರಾದಲ್ಲಿ ಲೋಹದ ಹಕ್ಕಿಗಳ ಕಲರವ ಕೂಡ ಇರಲಿದೆ.
ಇನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಕೇಳಲಾಗಿದೆ. ಅವಕಾಶ ಸಿಕ್ಕರೆ ಪ್ರಧಾನಿ ಮೋದಿಯವರನ್ನು ಭೇಟಿಯಾಗುತ್ತೇವೆ ಎಂದರು. ಇದೇ ವೇಳೆ ರಾಹುಲ್ ಗಾಂಧಿ ಭೇಟಿಗೂ ನಾಳೆ ಯತ್ನಿಸಲಾಗುತ್ತಿದೆ. ಸಮಯ ನೀಡಿದರೆ ಅವರನ್ನೂ ಭೇಟಿಯಾಗುತ್ತೇವೆ ಎಂದು ತಿಳಿಸಿದರು.