ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಸಾವಿನ ಸರಣಿ ಮುಂದುವರೆದಿದ್ದು, ನಿನ್ನೆ ಒಂದೇ ದಿನ 10 ವರ್ಷದ ಬಾಲಕ, ಯುವಕರು ಸೇರಿ ಎಂಟು ಜನ ಸಾವನ್ನಪ್ಪಿದ್ದಾರೆ.
ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ 10 ವರ್ಷದ ಬಾಲಕ ಗುಂಡ್ಲುಪೇಟೆಯ ಮನೋಜ್ ಶಾಲೆಯಲ್ಲಿ ಪಾಠ ಕೇಳುತ್ತಿದ್ದಾಗಲೇ ಮೃತಪಟ್ಟಿದ್ದಾನೆ. ಧಾರವಾಡದಲ್ಲಿ ಯುಪಿಎಸ್ಸಿ ಆಕಾಂಕ್ಷಿ ಪದವೀಧರರೆ ಜೀವಿತಾ ಕುಸಗೂರ(26) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ದಾವಣಗೆರೆಯಲ್ಲಿ ಅಕ್ಷಯ್(22), ಹರೀಶ್(50) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ಇಬ್ಬರು, ಕೊಡಗು, ಕಲಬುರಗಿಯಲ್ಲಿ ತಲಾ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.