ಕೊಪ್ಪಳ: ಜಾತಿ ಬೇರೆಯಾಗಿದ್ದ ಕಾರಣಕ್ಕೆ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಪ್ರೇಮಿಗಳು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಪ್ಪಳ ಜಿಲ್ಲೆ ಮುನಿರಾಬಾದ್ ಸಮೀಪ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಜಿಗಿದು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಹೊಸ ಲಿಂಗಾಪುರ ಗ್ರಾಮದ ಪ್ರವೀಣ್(18) ಸಾಣಾಪುರದ ಅಂಜಲಿ(18) ಮೃತಪಟ್ಟವರು.
ಪರಸ್ಪರ ಇಬ್ಬರು ಪ್ರೀತಿಸುತ್ತಿದ್ದು, ಜಾತಿ ಬೇರೆಯಾಗಿದ್ದ ಕಾರಣ ಯುವಕನ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಬೇಸತ್ತ ಇಬ್ಬರೂ ಎರಡು ದಿನದ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.