ಯಾದಗಿರಿ: ವ್ಯಕ್ತಿಯೊಬ್ಬ ವಿಧವೆ ಮಹಿಳೆಯೊಬ್ಬರಿಗೆ ಖಾಸಗಿ ಅಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯ ವಿರುದ್ಧವೇ ಸುಳ್ಳು ಪ್ರಕರಣ ದಾಖಲಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿಯ ಹುಣಸಗಿ ಕೊಡೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಿವಪ್ಪ ಉದ್ದನ್ ಎಂಬಾತ ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತವಾಗಿ ವರ್ತಿಸಿದ್ದಾನೆ. ವ್ಯಕ್ತಿಯ ವಿಲಕ್ಷಣ ವರ್ತನೆ ಪ್ರಶ್ನೆ ಮಾಡಿದ್ದಕ್ಕೆ ಮಹಿಳೆ ಹಾಗೂ ಆಕೆಯ ಪೋಷಕರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಇದರಿಂದ ಸಿಟ್ಟಿಗೆದ್ದ ಗ್ರಾಮದ ಮಹಿಳೆಯರು ವಿಕೃತಿ ಮೆರೆದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಪೊಲೀಸ್ ಠಾಣೆ ಎದುರು ಮಹಿಳೆಯರು ಪ್ರತಿಭಟನೆ ನಡೆಸಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸುವಂತೆ ಪಟ್ತು ಹಿಡಿದಿದ್ದಾರೆ.
ಶಿವಪ್ಪನ ವರ್ತನೆ ಪ್ರಶ್ನಿಸಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ನಡೆಸಿ ಮಹಿಳೆ ಹಾಗೂ ಆಕೆಯ ಪೋಷಕರ ವಿರುದ್ಧ ಆತ ಕೊಡೇಕಲ್ ಠಾಣೆಯಲ್ಲಿ ಸುಳ್ಳು ಕೇಸ್ ದಾಖಲಿಸಿದ್ದಾನೆ. ಮಹಿಳೆ ದೂರು ನೀಡಲು ಬಂದರೆ ಪೊಲೀಸರು ದೂರು ಪಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.