BREAKING : 5 ವರ್ಷ ನಾನೇ ಸಿಎಂ , ಹೆಚ್ಚಿನ ಶಾಸಕರೇನು  DCM ಡಿ.ಕೆ ಶಿವಕುಮಾರ್ ಬೆಂಬಲಿಸಿಲ್ಲ : CM ಸಿದ್ದರಾಮಯ್ಯ

ಬೆಂಗಳೂರು : 5 ವರ್ಷ ನಾನೇ ಸಿಎಂ , ಹೆಚ್ಚಿನ ಶಾಸಕರು ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಸಿಲ್ಲ ಎಂದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಷ್ಟ್ರೀಯ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ.! ಇದರಲ್ಲಿ ತಪ್ಪೇನು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಇರುತ್ತೇನೆ. ಯಾವುದೇ ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಬದಲಾಗಲಿ ಎಂಬ ಹೇಳಿಕೆ ನೀಡಿಲ್ಲ. ಸಿದ್ದರಾಮಯ್ಯ ಸಿಎಂ ಆಗಿರುವಾಗ ಸಿಎಂ ಬದಲಾವಣೆ ಚರ್ಚೆ ಅನವಶ್ಯಕ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂದಿದ್ದಾರೆ. ಪವರ್ ಶೇರಿಂಗ್ ಚರ್ಚೆಯಾಗಿಲ್ಲ. ಮುಂದಿನ ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಇರುತ್ತೇನೆ. 2028ರಲ್ಲಿಯೂ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ. ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.

‘5 ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಹೆಚ್ಚಿನ ಶಾಸಕರೇನು ಡಿಕೆಶಿ ಬೆಂಬಲಿಸಿಲ್ಲ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿಲ್ಲ. ನಾನಾಗಾಗಲಿ ಡಿಕೆಶಿ ಆಗಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ದರಾಗಿರಬೇಕು ಎಂದರು. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಅದರಲ್ಲಿ ತಪ್ಪೇನೂ ಇಲ್ಲ, ಕೆಲ ಶಾಸಕರು ಡಿ.ಕೆ.ಶಿವಕುಮಾರ್ ಅವರನ್ನು ಬೆಂಬಲಿಸುತ್ತಾರೆ. ಹೆಚ್ಚಿನ ಶಾಸಕರು ಡಿ.ಕೆ.ಶಿವಕುಮಾರ್ ಅವರನ್ನು ಬೆಂಬಲಿಸಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುವುದೋ ಅದಕ್ಕೆ ನಾನು ಬದ್ಧನಾಗಿದ್ದೇನೆ. ನಾನಾಗಲಿ, ಡಿ.ಕೆ.ಶಿವಕುಮಾರ್ ಆಗಲಿ ಹೈಕಮಾಂಡ್ ಹೇಳಿದ್ದನ್ನು ಪಾಲಿಸಲೇಬೇಕು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read