HomeLatest NewsBREAKING: ವಸತಿ ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ 7ನೇ ತರಗತಿ ವಿದ್ಯಾರ್ಥಿ

BREAKING: ವಸತಿ ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ 7ನೇ ತರಗತಿ ವಿದ್ಯಾರ್ಥಿ

ಕಲಬುರಗಿ: 7ನೇ ತರಗತಿ ವಿದ್ಯಾರ್ಥಿ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆದಿದೆ.

ಸೇಡಂ ತಾಲೂಕಿನಲ್ಲಿರುವ ಇಂದಿರಾ ಗಾಂಧಿ ಬಾಲಕರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ನಾರಾಯಣ ಪಾಳಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಕೊಠಡಿಯ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿದ್ಯಾರ್ಥಿಯ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular