HomeLatest Newsಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋ, ಖಾತೆಗಳನ್ನು ಕಂಡಲ್ಲಿ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ:...

ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋ, ಖಾತೆಗಳನ್ನು ಕಂಡಲ್ಲಿ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್‌ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು ನಮ್ಮ ಕರ್ನಾಟಕದ ಪರಂಪರೆಯಲ್ಲ. ಕಳೆದ ಕೆಲವು ದಿನಗಳಲ್ಲಿ ಇಂತಹ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿದ್ದು, ತಕ್ಷಣವೇ ಕೃತ್ಯ ಎಸಗಿದವರನ್ನು ಬಂಧಿಸಲಾಗುವುದು. ಅಲ್ಲದೇ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನು ಸರ್ಕಾರ ಜರುಗಿಸಿದೆ. ಇದರ ಜೊತೆಗೆ ನಾವು ಇಂತಹ ಕೃತ್ಯಗಳ ಮೇಲೆ ತೀವ್ರ ನಿಗಾ ವಹಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಹಿಳೆಯರು ಕೀಳುದೃಷ್ಟಿಯ ಅಥವಾ ಯಾವುದೇ ತರನಾದ ಕಿರುಕುಳಗಳ ಭಯವಿಲ್ಲದೆ ಧೈರ್ಯವಾಗಿ ನಡೆಯಲಾರದ ಸ್ಥಿತಿಗೆ ನಮ್ಮ ಸಮಾಜ ಹೋಗುತ್ತಿದೆ ಎಂದಾದರೆ, ನಾಗರಿಕರಾಗಿ ನಾವು ಯಾವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ? ಎಂಬುದನ್ನು ಎಲ್ಲರೂ ತಮ್ಮ ಆತ್ಮಸಾಕ್ಷಿಯನ್ನೊಮ್ಮೆ ಪ್ರಶ್ನಿಸಿಕೊಳ್ಳಬೇಕಿದೆ. ಇವು ನಮ್ಮ ಸಾಮಾಜಿಕ ಮೌಲ್ಯಗಳಿಗೆ ವಿರುದ್ಧವಾದವು ಮಾತ್ರವಲ್ಲ, ಕಾನೂನಿನ ರೀತಿಯಲ್ಲಿ ಶಿಕ್ಷಾರ್ಹ ಅಪರಾಧಗಳು ಕೂಡ ಹೌದು.

ನಾಡಿನ ಮಹಿಳೆಯರ ಜೊತೆ ನಮ್ಮ ಸರ್ಕಾರ ದೃಢವಾಗಿ ನಿಂತಿದೆ, ನಿಮ್ಮ ಸುರಕ್ಷೆ ಮತ್ತು ಘನತೆ ನಮ್ಮ ಸರ್ಕಾರದ ಆಧ್ಯತೆಯಾಗಿದೆ. ನಿಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆಗೆ ನಾವು ಬದ್ಧರಿದ್ದೇವೆ ಎಂಬುದನ್ನು ನಾಡಿನ ನನ್ನ ಎಲ್ಲಾ ತಾಯಂದಿರಿಗೆ, ಅಕ್ಕತಂಗಿಯರಿಗೆ ತಿಳಿಸಲು ಬಯಸುತ್ತೇನೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾರೇ ಆಗಲಿ ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳನ್ನು ಆನ್‌ಲೈನ್‌ನಲ್ಲಿ ನೋಡಿದರೆ, ತಕ್ಷಣವೇ ಸೈಬರ್ ಸೆಲ್‌ನ ದೂರವಾಣಿ ಸಂಖ್ಯೆ: 1930ಗೆ ಕರೆಮಾಡಿ ಅಥವಾ ವೆಬ್‌ಸೈಟ್: cybercrime.gov.in ನಲ್ಲಿ ದೂರು ದಾಖಲಿಸಿ.

ನಾವು ನೀವೆಲ್ಲರೂ ಜೊತೆಗೂಡಿ ಪ್ರತಿ ಮಹಿಳೆಯೂ ಸುರಕ್ಷಿತವಾಗಿ, ಗೌರವದಿಂದ ಮತ್ತು ಸ್ವಾತಂತ್ರ್ಯದಿಂದ ಬದುಕುವ ಶ್ರೇಷ್ಠ ಕರ್ನಾಟಕವನ್ನು ನಿರ್ಮಿಸೋಣ ಎಂದು ಕರೆ ನೀಡಿದ್ದಾರ್

For Latest News Updates, Join Our Whatsapp Community🚩
RELATED ARTICLES

Most Popular