ಕೋಲಾರ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿಯಪ್ಪ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎಂದರು.
ಒಬಿಸಿ ಸಲಹಾ ಮಂಡಳಿಯಲ್ಲಿ ಹಲವು ಮಂದಿ ಇದ್ದಾರೆ. ಸಿಎಂ ಸಿದ್ದರಾಮಯ್ಯ ಹಾಲಿ ಮುಖ್ಯಮಂತ್ರಿಗಳಾಗಿರುವ ಕಾರಣ ಅವರನ್ನೂ ಸೇರಿಸಿಕೊಂದು ಜವಾಬ್ದಾರಿ ಕೊಟ್ಟಿದ್ದಾರೆ ಎಂದು ತಿಳಿಸಿದರು.
ಇನ್ನು ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂಬ ಕೆಲ ಸ್ವಾಮೀಜಿಗಳ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಮುನಿಯಪ್ಪ, ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಹಿತೈಶಿಗಳು ಹೇಳಬಹುದು. ಅದರಲ್ಲಿ ತಪ್ಪೇನಿಲ್ಲ, ಆದರೆ ಈಗ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಹೇಳಿದರು.
TAGGED:ಕೆ.ಹೆಚ್.ಮುನಿಯಪ್ಪ