HomeLatest NewsBREAKING: ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ಭಕ್ತರ ಭಾರೀ ನೂಕುನುಗ್ಗಲು: ಕಾಲ್ತುಳಿತದಲ್ಲಿ ಮಹಿಳೆ ಸಾವು

BREAKING: ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ಭಕ್ತರ ಭಾರೀ ನೂಕುನುಗ್ಗಲು: ಕಾಲ್ತುಳಿತದಲ್ಲಿ ಮಹಿಳೆ ಸಾವು

ಕಲಬುರಗಿ:  ಗಾಣಗಾಪುರದ ದತ್ತಾತ್ರೇಯ ಸನ್ನಿಧಿಯಲ್ಲಿ ಕಾಲ್ತುಳಿತಕ್ಕೆ ಮಹಿಳೆ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಗಾಣಗಾಪುರದಲ್ಲಿ ಘಟನೆ ನಡೆದಿದೆ.

ಬೀದರ್ ಜಿಲ್ಲೆ ಬಸವಕಲ್ಯಾಣ ಮೂಲದ ಕಲಾವತಿ(50) ಮೃತಪಟ್ಟವರು ಎಂದು ಹೇಳಲಾಗಿದೆ. ಗುರುಪೂರ್ಣಿಮೆ ಹಿನ್ನೆಲೆಯಲ್ಲಿ ಕಲಾವತಿ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ಬಂದಿದ್ದರು. ದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮೃತಪಟ್ಟಿದ್ದಾರೆ.

ರಾಜ್ಯ ಮಾತ್ರವಲ್ಲದೇ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಬಂದಿದ್ದ ಹಿನ್ನೆಲೆಯಲ್ಲಿ ಗಾಣಗಾಪುರದ ದತ್ತಾತ್ರೇಯ ದೇವಾಲಯದಲ್ಲಿ ನೂಕುನುಗ್ಗಲು ಉಂಟಾಗಿ ಕಲಾವತಿ ಮೃತಪಟ್ಟಿದ್ದಾರೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular