HomeLatest Newsಶುಲ್ಕ ಹೆಚ್ಚಳ ಆತಂಕದಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಗುಡ್ ನ್ಯೂಸ್: ಈ ವರ್ಷ ನರ್ಸಿಂಗ್ ಕೋರ್ಸ್ ಶುಲ್ಕ...

ಶುಲ್ಕ ಹೆಚ್ಚಳ ಆತಂಕದಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಗುಡ್ ನ್ಯೂಸ್: ಈ ವರ್ಷ ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ

ಬೆಂಗಳೂರು: ಈ ವರ್ಷ ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಳ ಮಾಡುವುದಿಲ್ಲವೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ನರ್ಸಿಂಗ್ ಕಾಲೇಜುಗಳ ಸಂಘದೊಂದಿಗೆ ಸಭೆ ನಡೆಸಿದ ಸಚಿವರು, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮತ್ತು ಪೋಷಕರ ಮೇಲಿನ ಮೇಲಿನ ಹೊರೆ ತಪ್ಪಿಸುವ ಉದ್ದೇಶದಿಂದ ಈ ವರ್ಷ ನರ್ಸಿಂಗ್ ಕೋರ್ಸ್ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಆರ್ಥಿಕವಾಗಿ ದುರ್ಬಲ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಈ ಶೈಕ್ಷಣಿಕ ವರ್ಷ ಶುಲ್ಕ ಹೆಚ್ಚಳ ಮಾಡುವುದಿಲ್ಲ. ನರ್ಸಿಂಗ್ ವಿದ್ಯಾರ್ಥಿಗಳು ಹೆಚ್ಚಾಗಿ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದವರು. ಹೀಗಾಗಿ ಹೆಚ್ಚುವರಿ ಶುಲ್ಕ ವಿಧಿಸುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರಿ ಕೋಟಾದಡಿ 10,000 ರೂ., ಇತರೆ ಕೋಟಾದಡಿ ಒಂದು ಲಕ್ಷ ರೂ., ಕರ್ನಾಟಕೇತರ ವಿದ್ಯಾರ್ಥಿಗಳಿಗೆ 1.4 ಲಕ್ಷ ರೂ. ಶುಲ್ಕ ರಚನೆ ಈ ವರ್ಷ ಕೂಡ ಮುಂದುವರೆಯಲಿದೆ. ಅನುಮೋದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಪಡೆಯುವ ಕಾಲೇಜುಗಳ ಮಾನ್ಯತೆ ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular