HomeLatest Newsದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ ಬೀದಿ ನಾಯಿಗಳಿಗೂ ಬಾಡೂಟ ಭಾಗ್ಯ: ಬಿಬಿಎಂಪಿ ನಿರ್ಧಾರಕ್ಕೆ ಶಾಸಕ ರಾಮಮೂರ್ತಿ ಆಕ್ರೋಶ

ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ ಬೀದಿ ನಾಯಿಗಳಿಗೂ ಬಾಡೂಟ ಭಾಗ್ಯ: ಬಿಬಿಎಂಪಿ ನಿರ್ಧಾರಕ್ಕೆ ಶಾಸಕ ರಾಮಮೂರ್ತಿ ಆಕ್ರೋಶ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಕಾಂಗ್ರೆಸ್ ಸರ್ಕಾರ ಬಾಡೂಟ ಕಲ್ಪಿಸಲು ಮುಂದಾಗಿದೆ.

ಬೀದಿ ನಾಯಿಗಳಿಗೆ ಮಾಂಸ, ಚಿಕನ್, ಎಗ್ ರೈಸ್ ನೀಡಲು ಬಿಬಿಎಂಪಿ ಮುಂದಾಗಿದೆ. ಪಾಲಿಕೆಯ 8 ವಲಯಗಳಲ್ಲಿ ಪ್ರತಿದಿನ 600 ರಿಂದ 700 ಬೀದಿ ನಾಯಿಗಳಿಗೆ ಬಾಡೂಟ ನೀಡಲು ಬಿಬಿಎಂಪಿ 2.80 ಕೋಟಿ ರೂ. ಟೆಂಡರ್ ಕರೆದಿದೆ. ಬಿಬಿಎಂಪಿಯ ಈ ಕ್ರಮಕ್ಕೆ ತೆರಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರ ತೆರಿಗೆಯ ಹಣವನ್ನು ಈ ರೀತಿ ಬೀದಿ ನಾಯಿಗಳಿಗೆ ಬಾಡೂಟ ಹಾಕಲು ಪೋಲು ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಬಿಎಂಪಿಯಿಂದ ಬೀದಿ ನಾಯಿಗಳಿಗೆ ಚಿಕನ್ ಹಾಕುವ ಕ್ರಮಕ್ಕೆ ಶಾಸಕ ಸಿ.ಕೆ. ರಾಮಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೆರಿಗೆ ಹಣ ಬೀದಿ ನಾಯಿಗಳಿಗೆ ಹಾಕುತ್ತಿರುವುದು ದುರ್ದೈವದ ಸಂಗತಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೀದಿ ನಾಯಿಗಳ ಉಪಟಳದಿಂದ ಜನರಿಗೆ ತೊಂದರೆ ಆಗುತ್ತಿದೆ. ಯಾರೂ ಹೇಳಿದ್ದಾರೆ ಎಂದು ಚಿಕನ್ ನೀಡುವುದು ಸರಿಯಲ್ಲ. ಬೀದಿ ನಾಯಿಗಳು ಮಕ್ಕಳಿಗೆ ಕಚ್ಚುತ್ತವೆ. ಹಿಂಸೆ ಮಾಡುತ್ತವೆ. ಬೀದಿ ನಾಯಿಗಳಿಗೆ ಚಿಕನ್ ಹಾಕುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular