ನವದೆಹಲಿ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಒಪ್ಪಂದ ಆಗಿಲ್ಲ. ನಾಯಕತ್ವಕ್ಕಾಗಿ ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವೆ ನಡೆದ ಚುನಾವಣೆಯಲ್ಲಿ ಗೆದ್ದು ನಾನು ಮುಖ್ಯಮಂತ್ರಿ ಆಗಿದ್ದೇನೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ಪೂರ್ಣಗೊಳಿಸುತ್ತೇನೆ.
ಹೀಗೆಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಭಾರಿ ಸಂಚಲನಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಅಧಿಕಾರ ಹಂಚಿಕೆ ಒಪ್ಪಂದ ಕುರಿತಾಗಿ ಹೇಳಿಕೆಗಳು ಬರುತ್ತಿದ್ದವು. ಅಂತಹ ಒಪ್ಪಂದವೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ವೇಳೆ ಆಂತರಿಕ ಚುನಾವಣೆ ನಡೆಯಿತು ಎಂಬುದನ್ನು ಕೂಡ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಬಹಿರಂಗಪಡಿಸಿದ್ದು, ಭಾರೀ ಸಂಚಲನ ಮೂಡಿಸಿದೆ. ಈ ಹೇಳಿಕೆ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಸ್ವಪಕ್ಷ ಮತ್ತು ವಿಪಕ್ಷ ಸೇರಿದಂತೆ ಎಲ್ಲರಿಗೂ ಐದು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಅಧಿಕಾರ ಹಂಚಿಕೆ ಇಲ್ಲ ಎಂದು ಸ್ಪಷ್ಟ ಸಂದೇಶ ರವಣಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದಾಗ ಹಿಂದೆ ನಮ್ಮಿಬ್ಬರ ನಡುವೆ ಚುನಾವಣೆ ನಡೆಸಿದ್ದರು. ನಾನು ಆಗ ಗೆದ್ದಿದ್ದೇನೆ. ಡಿಕೆಶಿಯಾಗಲಿ, ಶಾಸಕರಾಗಲಿ ಮುಖ್ಯಮಂತ್ರಿ ಆಗುವ ಆಸೆ ಪಡುವುದು ತಪ್ಪಲ್ಲ. ಆದರೆ, ಸಿಎಂ ಕುರ್ಚಿ ಖಾಲಿ ಇಲ್ಲ. ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ಈ ರೀತಿ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಪಡೆಯಲ್ಲಿ ಸಂಚಲನ ಮೂಡಿಸಿದೆ.