HomeLive News2025ನೇ ಸಾಲಿನ 'ರಾಷ್ಟ್ರಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ'ಗೆ ಆನ್‌ಲೈನ್ ಅರ್ಜಿ ಆಹ್ವಾನ

2025ನೇ ಸಾಲಿನ ‘ರಾಷ್ಟ್ರಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ’ಗೆ ಆನ್‌ಲೈನ್ ಅರ್ಜಿ ಆಹ್ವಾನ

ಶಾಲಾ ಶಿಕ್ಷಣ ಇಲಾಖೆಯ 2025ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಡೆಯಲು ಅರ್ಹರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ರಾಜ್ಯ ಸರ್ಕಾರದ ಶಾಲೆಗಳ/ ಅನುದಾನಿತ ಶಾಲೆಗಳ/ ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಶಾಲಾ ಕಾಲೇಜುಗಳಲ್ಲಿ ಖಾಯಂಗೊಂಡ ಶಿಕ್ಷಕರು/ಮುಖ್ಯ ಶಿಕ್ಷಕರು/ ಉಪನ್ಯಾಸಕರು/ ಪ್ರಾಂಶುಪಾಲರುಗಳು ಕೇಂದ್ರ ಸರ್ಕಾರದ ಮತ್ತು ಸಿ.ಬಿ.ಎಸ್.ಸಿ. ಮಾನ್ಯತೆ ಪಡೆದ ಶಾಲೆಗಳಲ್ಲಿ ಖಾಯಂಗೊಂಡ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಹಾಗೂ 2025ರ ಏಪ್ರಿಲ್ ರವರೆಗೆ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿದ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಆಸಕ್ತರು https://nationalawardstoteachers,education.gov.in ಮೂಲಕ ಜು. 15 ರೊಳಗಾಗಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular