ಯಾದಗಿರಿ: ಜಾತಿ ನಿಂದನೆ ಪ್ರಕರಣ ದಾಖಲಿಸುವುದಾಗಿ ಪರಿಶಿಷ್ಟ ಜಾತಿ ಕುಟುಂಬದವರು ಬೆದರಿಸಿದ್ದರಿಂದ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುತ್ರನ ಸಾವಿನ ಸುದ್ದಿಯಿಂದ ಆಘಾತಕ್ಕೊಳಗಾದ ತಂದೆಯೂ ಮೃತಪಟ್ಟಿದ್ದಾರೆ.
ವಡಗೇರಾ ತಾಲೂಕಿನ ಕೋನಹಳ್ಳಿ ಗ್ರಾಮದ ಬಳಿ ಮೆಹಬೂಬ್(21) ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿದ ಆತನ ತಂದೆ ಸೈಯದ್ ಮೀರಸಾಬ್ ಮುಲ್ಲಾ(50) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಜಮೀನಿಗೆ ತೆರಳುವ ರಸ್ತೆಯ ಬಗ್ಗೆ ಪರಿಶಿಷ್ಟ ಜಾತಿ ಕುಟುಂಬದವರೊಂದಿಗೆ ಜಗಳವಾಗಿತ್ತು. ಜಾತಿ ನಿಂದನೆ ಪ್ರಕರಣ ದಾಖಲಿಸುವುದಾಗಿ ಕುಟುಂಬದವರು ಬೆದರಿಕೆ ಹಾಕುತ್ತಿದ್ದರು. ಹೀಗಾಗಿ ಮೆಹಬೂಬ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುತ್ರನ ಸಾವಿನ ಸುದ್ದಿ ತಿಳಿದ ಮೀರಸಾಬ್ ಮುಲ್ಲಾ ಅವರಿಗೆ ಹೃದಯಘಾತವಾಗಿದ್ದು, ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಡಗೇರಾ ಠಾಣೆಯಲ್ಲಿ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.