ಚಿಕ್ಕಮಗಳೂರು : ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದ ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಸಂಚಾರ ಆರಂಭವಾಗಲಿದೆ.
ಹೌದು. ಇಂದು ಬೆಳಗ್ಗೆ 11 : 30 ಕ್ಕೆ ಕೇಂದ್ರ ರೈಲ್ವೇ ಸಚಿವ ವಿ ಸೋಮಣ್ಣ ಅವರು ಚಿಕ್ಕಮಗಳೂರು-ತಿರುಪತಿ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.
ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ.
ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು… pic.twitter.com/apW3Wfx78a
— V. Somanna (@VSOMANNA_BJP) June 28, 2025