ಬೆಂಗಳೂರು : ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ! ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

