BREAKING : ವಿಧಾನಪರಿಷತ್ ಮಾಜಿ ಸಭಾಪತಿ ಎನ್.ತಿಪ್ಪಣ್ಣ ನಿಧನಕ್ಕೆ CM ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ಹಿರಿಯ ರಾಜಕಾರಣಿ ಮತ್ತು ವಿಧಾನ ಪರಿಷತ್ನ ಮಾಜಿ ಸಭಾಪತಿ ಎನ್.ತಿಪ್ಪಣ್ಣ ಇಂದು ನಿಧನರಾಗಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

’ಹಿರಿಯ ರಾಜಕಾರಣಿ ಮತ್ತು ವಿಧಾನ ಪರಿಷತ್‌ನ ಮಾಜಿ ಸಭಾಪತಿ ಎನ್.ತಿಪ್ಪಣ್ಣ ಅವರ ನಿಧನದಿಂದ ದು:ಖಿತನಾಗಿದ್ದೇನೆ. ಜನತಾ ಪರಿವಾರದಲ್ಲಿ ದೀರ್ಘಕಾಲ ಸಹದ್ಯೋಗಿಯಾಗಿದ್ದ ತಿಪ್ಪಣ್ಣ ಅವರು ಹೃದಯವಂತ ಸಂಗಾತಿಯಾಗಿದ್ದರು. ಕಸಬುದಾರ ವಕೀಲರಾಗಿದ್ದ ಅವರು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ತಿಪ್ಪಣ್ಣ ಅವರ ನಿಧನದಿಂದ ಶೋಕತಪ್ತರಾಗಿರುವ ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸುವೆ’’ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read