ಚಿಕ್ಕಮಗಳೂರು : ಚಿಕ್ಕಮಗಳೂರು-ತಿರುಪತಿ ನೂತನ ರೈಲು ಸಂಚಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಇಂದು ಚಾಲನೆ ನೀಡಿದರು. ಹೌದು, ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದ ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಸಂಚಾರ ಆರಂಭವಾಗಿದೆ.
ಇಂದು ಚಿಕ್ಕಮಗಳೂರಿನಲ್ಲಿ ಕೇಂದ್ರ ರೈಲ್ವೇ ಸಚಿವ ವಿ ಸೋಮಣ್ಣ ಅವರು ಚಿಕ್ಕಮಗಳೂರು-ತಿರುಪತಿ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ ರವಿ, ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಮತ್ತಿತರರಿದ್ದರು.
ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ.
ವರದಿ : ಕಿರಣ್ , ಚಿಕ್ಕಮಗಳೂರು

