ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಅರಣ್ಯ ವ್ಯಾಪ್ತಿಯಲ್ಲಿ ಐದು ಹುಲಿಗಳು ಸಾವನ್ನಪ್ಪಿದ್ದ ಘಟನೆ ಬೆನ್ನಲ್ಲೇ ಇದೀಗ ಚಿರತೆ ಮೃತದೇಹ ಪತ್ತೆಯಾಗಿದೆ.
ಕೊತ್ತಲವಾಡಿ ಬಳಿ ಬೆಟ್ಟದಲ್ಲಿ ಚಿರತೆ ಕಳೇಬರಹ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ವಿಷಪ್ರಾಶನ ಮಾಡಿರುವ ಸಹ್ಂಕೆ ವ್ಯಕ್ತವಾಗಿದೆ. ಪ್ರದೀಪ್ ಎಂಬುವವರ ಗಣಿ ತ್ಯಾಜ್ಯದ ಕಲ್ಲು ಸಂಗ್ರಹವಿರುವ ಜಮೀನಿನಲ್ಲಿ ಸುಮಾರು 5 ವರ್ಷದ ಗಂಡು ಚಿರತೆಯ ಶವ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಬಿ.ಆರ್.ಟಿ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ಮೂರು ದಿನಗಳ ಹಿಂದೆಯೇ ಚಿರತೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಬಳಿಕ ಚಿರತೆ ಸಾವಿಗೆ ನಿಖರ ಕಾರಣ ತಿಳಿಯಲಿದೆ.