BIG NEWS: ಡಿ.ಕೆ.ಶಿವಕುಮಾರ್ ಸಿಎಂ ಆಗುವುದು ನಿಶ್ಚಿತ: ನಿಶ್ಚಲಾನಂದನಾಥ ಸ್ವಾಮೀಜಿ ಭವಿಷ್ಯ

ಮಂಡ್ಯ: ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನ ಗಳಿಸಲು ಡಿ.ಕೆ.ಶಿವಕುಮಾರ್ ಸಾಕಷ್ಟು ಶ್ರಮಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಬೇಕು ಎಂದು ಅವರ ಅಭಿಮಾನಿಗಳು ಬಯುಸುತ್ತಿದ್ದಾರೆ. ಅವರು ಸಿಎಂ ಆಗುವುದು ನಿಶ್ಚಿತ ಎಂದರು.

ಪಕ್ಷಕ್ಕಾಗಿ ದುಡಿದ ಹಿರಿಯರಿಗೆ ಸಿಎಂ ಆಗುವ ಹಂಬಲ ಇದ್ದೇ ಇರುತ್ತದೆ. ಅದೇ ರೀತಿ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ನಾವೂ ಕೂಡ ಬಯಸುತ್ತೇವೆ. ಡಿ.ಕೆ.ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ. ತಾಳ್ಮೆಯಿಂದ ಕಾದು ಒಳ್ಳೆಯ ಸ್ಥಾನ ಪಡೆದುಕೊಳ್ಳುತ್ತಾರೆ. ಅವರನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಯಾವುದಕ್ಕೂ ಆತುರಪಡುವುದಿಲ್ಲ. ಸಂಯಮದಿಂದ ಪಕ್ಷವನ್ನು ಮುನ್ನಡೆಸಿ ಇಲ್ಲಿಯವರೆಗೆ ತಂದಿದ್ದಾರೆ ಎಂದರು.

ಒಕ್ಕಲಿಗ ಸಮುದಾಯ ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದು ಚುನಾವಣೆಯಲ್ಲಿ ಬೆಂಬಲಿಸಿತ್ತು. ಮೈಸೂರು ಭಾಗದಲ್ಲಿ ಹೆಚ್ಚು ಒಲವು ತೋರಿದ್ದಕ್ಕಾಗಿ ಕಾಂಗ್ರೆಸ್ ಗೆ ಹೆಚ್ಚು ಸೀಟು ಸಿಕ್ಕವು. ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತೆ ಎಂಬುದನ್ನು ಕಾದು ನೋಡೋಣ. ದೇವರ ಅನುಗ್ರಹ ಅವರ ಮೇಲೆ ಇರಲಿ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read