ಬೆಂಗಳೂರು: ರಾಜ್ಯದಲ್ಲಿ ಜುಲೈ 15 ರಿಂದ ಮುಂಗಾರು ಮಳೆ ಬಿರುಸುಗೊಕೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶುಕ್ರವಾರ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಮಳೆಯಾಗಿದೆ. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂಗಾರು ದುರ್ಬಲವಾಗಿದ್ದು, ಮೋಡಕವಿದ ವಾತಾವರಣವಿದ್ದರೂ ಮಳೆಯಾಗಿಲ್ಲ.
ಜುಲೈ 15 ರಿಂದ ಮುಂದಿನ 4 ದಿನಗಳ ಕಾಲ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ, ಜುಲೈ 16 ರಿಂದ 18ರವರೆಗೆ ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮೋಡಮುಸುಕಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.