ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಮೈಕೆಲ್ ಡಿ.ಕುನ್ಹಾ ನೇತೃತ್ವದ ತನಿಖಾ ಆಯೋಗ ವರದಿ ಸಲ್ಲಿಸಿದ್ದು, ಹಲವಾರು ಅಂಶಗಳನ್ನು ಉಲ್ಲೇಖಿಸಿದೆ.
ಕಾಲ್ತುಳಿತ ಪ್ರಕರಣಕ್ಕೆ ಕೆ ಎಸ್ ಸಿಎ, ಆರ್ ಸಿಬಿ, ಡಿಎನ್ ಎ ಹಾಗೂ ಪೊಲೀಸರೇ ನೇರ ಹೊಣೆ. ವಿಜಯೋತ್ಸವ ಕಾರ್ಯಕ್ರಮ ನಡೆಸುವುದು ಅಸಾಧ್ಯ ಎಂಬುದು ಗೊತ್ತಿದ್ದರೂ ಎಲ್ಲರೂ ಶಾಮೀಲಾಗಿ ಕಾರ್ಯಕ್ರಮ ನಡೆಸಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಬಂದೋಬಸ್ತ್ ವ್ಯವಸ್ಥೆ ಸಮರ್ಪಕವಾಗಿ ಇರಲಿಲ್ಲ. ಇದರಿಂದಾಗಿ ಅಪಾರ ಜನಸಂಖ್ಯೆ ನುಗ್ಗುತ್ತಿದಂತೆ ಕಾಲ್ತುಳಿತ ದುರಂತ ಸಂಭವಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.