ನವದೆಹಲಿ: ದೆಹಲಿಯ ಸೀಲಾಮ್ ಪುರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜ್ದೂರ್ ಕಾಲೋನಿಯಲ್ಲಿ ಈ ದುರಂತ ಸಂಭವಿಸಿದೆ. 14 ತಿಂಗಳ ಮಗು ಸೇರಿ 8 ಜನರನ್ನು ಈಗಾಗಲೇ ರಕ್ಷಿಸಲಾಗಿದೆ. ಅವಶೇಷಗಳ ಅಡಿಯಲ್ಲಿ ಅಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ.
ಅಗ್ನಿಶಾಮಕ ಸಿಬ್ಬಂದಿಗಳು, ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ತಂಡ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಅವಶೇಷಗಳ ತೆರವು ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ದೆಹಲಿಯಲ್ಲಿ ಕಳೆದ ಒಂದು ವಾರದಲ್ಲಿ ಎರಡು ಕಟ್ಟಡ ಕುಸಿತ ಘಟನೆ ನಡೆದಿದ್ದು, ಇಂದು ನಾಲ್ಕು ಅಂತಸ್ತಿನ ಕಟ್ಟಡ ಕುಶಿದಿದೆ.
You Might Also Like
TAGGED:ದೆಹಲಿ