ಮಂಡ್ಯ: ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಗೆ ಮಂಡ್ಯ ಜಿಲ್ಲೆಯ ಎರಡನೇ ಜಿಲ್ಲಾ ಸೆಷನ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಶ್ರೀರಂಗಪಟ್ಟಣದ ಬೆಳಗೊಳ ಗ್ರಾಮದ ಶಿವಣ್ಣ (59) ಜೀವಾವಧಿ ಶಿಕ್ಷೆಗೆ ಗುರುಯಾದವನು. 2023ರ ಜನವರಿಯಲ್ಲಿ ತನ್ನ ಮನೆ ಮುಂದೆ ಆಟವಾಡುತ್ತುದ್ದ ಮೂರು ವರ್ಷದ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದ ಕಾಮುಕ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅಲ್ಲದೆ ಮಗುವುಗೆ ಬೆದರಿಕೆ ಹಾಕಿದ್ದ.
ವಿಷಯ ತಿಳಿದ ಮಗುವಿನ ತಾಯಿ ಕೃಷ್ಣರಾಜ ಸಾಗರ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿ ಶಿವಣ್ಣನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ನೀಚ ಕೃತ್ಯವೆಸಗಿದ್ದ ಬಗ್ಗೆ ಬಾಯ್ಬಿಟ್ಟಿದ್ದ. ಕೋರ್ಟ್ ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.
You Might Also Like
TAGGED:ಮಂಡ್ಯ