5 ವರ್ಷ ನಾನೇ ‘CM’ ಎಂದು ಬೊಬ್ಬೆ ಹೊಡೆಯುವ ಸಿದ್ದರಾಮಯ್ಯಗೆ 25,000 ಕ್ಕೂ ಹೆಚ್ಚು ಪಾಲಿಕೆ ಸಿಬ್ಬಂದಿಗಳ ಮುಷ್ಕರ ಕಣ್ಣಿಗೆ ಕಾಣುತ್ತಿಲ್ಲ : R.ಅಶೋಕ್ ಕಿಡಿ

ಬೆಂಗಳೂರು : 5 ವರ್ಷ ನಾನೇ ಸಿಎಂ ಎಂದು ಬೊಬ್ಬೆ ಹೊಡೆಯುವ ಸಿಎಂಗೆ 25,000 ಕ್ಕೂ ಹೆಚ್ಚು ಪಾಲಿಕೆ ಸಿಬ್ಬಂದಿಗಳ ಮುಷ್ಕರ ಕಣ್ಣಿಗೆ ಕಾಣುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

5 ವರ್ಷ ನಾನೇ ಸಿಎಂ ಎಂದು ಹಳ್ಳಿಯಿಂದ ದಿಲ್ಲಿವರೆಗೆ ಹಾದಿ ಬೀದಿಯಲ್ಲಿ ಬೊಬ್ಬೆ ಹೊಡೆಯುವ ಸಿಎಂ
@siddaramaiahಅವರಿಗೆ ರಾಜ್ಯಾದ್ಯಂತ 10 ಪಾಲಿಕೆಗಳ 25,000ಕ್ಕೂ ಹೆಚ್ಚು ಸಿಬ್ಬಂದಿಗಳು 5 ದಿನಗಳಿಂದ ಮಾಡುತ್ತಿರುವ ಮುಷ್ಕರ ಕಣ್ಣಿಗೆ ಕಾಣುತ್ತಿಲ್ಲ, ಕಿವಿಗೆ ಬೀಳುತ್ತಿಲ್ಲ. ಕುರ್ಚಿ ಕಿತ್ತಾಟದಲ್ಲಿ, ಬಣ ಬಡಿದಾಟದಲ್ಲಿ ಸಂಪೂರ್ಣವಾಗಿ ಮೈಮರೆತಿರುವ @INCKarnatakaಸರ್ಕಾರದ ಯಾವ ಮಂತ್ರಿಗಳೂ ಇದುವರೆಗೂ ಪ್ರತಿಭಟನಾ ನಿರತ ಪಾಲಿಕೆ ಸಿಬ್ಬಂದಿಗಳನ್ನು ಭೇಟಿ ಮಾಡುವ ಗೋಜಿಗೇ ಹೋಗಿಲ್ಲ. ಸಿಎಂ @siddaramaiah
ಅವರೇ, ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬಂತೆ ಅಧಿಕಾರವಿಲ್ಲದ ಕುರ್ಚಿಯಲ್ಲಿ ಎಷ್ಟು ದಿನ ಅಂಟಿಕೊಂಡು ಕೂರುತ್ತೀರಿ ಸ್ವಾಮಿ. ರಾಜೀನಾಮೆ ಕೊಟ್ಟು ಹೊರಡಿ. ಒಂದು ಸುಭದ್ರ, ಸುಸ್ಥಿರ, ಜನಪರ ಆಡಳಿತ ಕೊಡಬಲ್ಲ ಬಲಿಷ್ಠ ಮುಖ್ಯಮಂತ್ರಿಗಾಗಿ ಕನ್ನಡಿಗರು ಕಾಯುತ್ತಿದ್ದಾರೆ. ರಾಜೀನಾಮೆ ಕೊಟ್ಟು ಕನ್ನಡಿಗರ ಆಶಯ ಈಡೇರಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

https://twitter.com/RAshokaBJP/status/1943888499414909117
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read