ಮಂಗಳೂರು : ಮಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಎಂಆರ್ ಪಿಎಲ್ (MRPL) ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಸಿಬ್ಬಂದಿಗಳು ಮೃತಪಟ್ಟಿದ್ದಾರೆ.
ಮಂಗಳೂರು ಹೊರವಲಯದ ಸುರತ್ಕಲ್ ನ ಎಂಆರ್ ಪಿಎಲ್ ಘಟಕದಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ದೀಪಚಂದ್ರ ಭಾರ್ತಿಯಾ ಹಾಗೂ ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ. ಘಟಕದಲ್ಲಿ ದೋಷ ಕಂಡು ಬಂದ ಹಿನ್ನೆಲೆ ಅವರು ಪರಿಶೀಲನೆಗೆ ತೆರಳಿದ್ದರು. ಈ ವೇಳೆ ವಿಷಾನಿಲ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ರಕ್ಷಣೆಗೆ ಮುಂದಾಗಿದ್ದ ವಿನಾಯಕ ಮೈಗೇರಿ ಎನ್ನುವವರ ಸ್ಥಿತಿ ಕೂಡ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.