ರಾಮನಗರ: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದೆ.ನರ್ಸಿಂಗ್ ಹೋಂ ಮಾಲೀಕರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಮಂಜುನಾಥ್ (50) ಮೃತ ದುರ್ದೈವಿ. ನರ್ಸಿಂಗ್ ಹೋಂ ಹಾಗೂ ಮೆಡಿಕಲ್ ಶಾಪ್ ಮಾಲೀಕರಾಗಿದ್ದ ಮಂಜುನಾಥ್, ವಾಕಿಂಗ್ ಮಾಡುವಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಮಂಜುನಾಥ್ ಕನಕಪುರ ತಾಲೂಕು ಗ್ರಾಹಕರ ವೇದಿಕೆ ಅಧ್ಯಕ್ಷ ಹಾಗೂ ಔಷಧಿ ಮಾರಾಟಗಾರರ ಸಂಘದ ಅಧ್ಯಕ್ಷರೂ ಆಗಿದ್ದರು. ಮಂಜುನಾಥ್ ಅವರನ್ನು ಕಳೆದುಕೊಂಡಿರುವ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.