ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಮಾಡಬೇಕೋ, ಬೇಡವೋ ಎಂಬುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು, ಈ ಬಗ್ಗೆ ಅವರೇ ಮಾತನಾಡುತ್ತಿಲ್ಲ. ಹೀಗಿರುವಾಗ ನಾವು-ನೀವು ಚರ್ಚೆ ಮಾಡಿದರೆ ಅರ್ಥವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿದ್ದು ಯಾರು? ನಾವ್ಯಾರು ಈ ಬಗ್ಗೆ ಹೇಳಿಕೆ ಕೊಟ್ಟಿಲ್ಲ ಎಂದರು. ಸಿಎಂ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವರಿಷ್ಠರು ಹೀಗೆ ಯಾರೊಂದಿಗೂ ಚರ್ಚೆಯಾಗಿಲ್ಲ. ಸಿಎಂ ಬದಲಿಸುವ ಅಧಿಕಾರ ಇರುವ ನಾಯಕರು ಸುಮ್ಮನಿದ್ದಾರೆ. ಹೀಗಾಗಿ ಈ ಕುರಿತು ಚರ್ಚಿಸುವುದು ಅಪ್ರಸ್ತುತ ಎಂದರು.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಭೆ ನಡೆಸಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯೋನ್ಮುಖರಾಗುವಂತೆ ಶಾಸಕರಿಗೆ ಸೂಚಿಸಿದ್ದಾರೆ ಎಂದರು.
ಅಧ್ಯಕ್ಷರ ಬದಲಾವಣೆ ಕುರಿತು ಸಹ ಯಾವ ಚರ್ಚೆಯಾಗಿಲ್ಲ. ಎಲ್ಲವನ್ನೂ ಹೈಕಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.