ಬೆಂಗಳೂರು : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುದ್ದಿಗಳು ಹರಿದಾಡುತ್ತಿದೆ. ಇದರ ನಡುವೆ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ ನುಡಿದಿದೆ. ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ ನುಡಿದಿದೆ.
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನಲ್ಲಿ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ ನುಡಿದಿದೆ. ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಯೋಗ ಇದೆ ಎಂದು ಶ್ರೀ ವೆಂಕಪ್ಪಯ್ಯ ಮೈಲಾರದ ಕಾರ್ಣಿಕ ನುಡಿಯನ್ನು ವಿಶ್ಲೇಷಿಸಿದ್ದಾರೆ. 2025ರ ಪ್ರಸಕ್ತ ವರ್ಷದ ದೈವವಾಣಿ ತುಂಬಿದ ಕೊಡ ತುಳಿಕಿತಲೇ ಪರಾಕ್ ಎಂಬುದಾಗಿದೆ.
ರಾಜ್ಯದಲ್ಲಿ ತುಂಬಿದ ಕೊಡಪಾನದಂತೆ ಈಗ ಸರ್ಕಾರ ಇದೆ. ಎಲ್ಲರೂ ಒಗ್ಗಟ್ಟಿನಿಂದ ಇದ್ದರೇ ಯಾವುದೇ ತೊಂದರೆ ಆಗಲ್ಲ. ಮನಸ್ಸು ಕದಲಿದರೇ ಸರ್ಕಾರಕ್ಕೆ ಅಪಾಯವಿದೆ ಎಂಬುದಾಗಿ ಕಾರ್ಣಿಕ ಭವಿಷ್ಯ ನುಡಿದಿದೆ. . ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಬದಲಾವಣೆ ಆಗೋದು ಖಚಿತ ಎಂದು ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ನುಡಿಯನ್ನು ವಿಶ್ಲೇಷಿಸಿದ್ದಾರೆ.