ಚೆನ್ನೈ: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ದೇವಾಲಯದ ಕಾವಲುಗಾರ ಅಜಿತ್ ಕುಮರ್ ಲಾಕಪ್ ಡೆತ್ ಪ್ರಕರಣದಲ್ಲಿ ಬಲಿಯಾಗಿದ್ದು, ಕೇಂದ್ರ ತನಿಖಾ ದಳ ಆರು ಪೊಲೀಸರ ವಿರುದ್ಧ ಕೊಲೆ ಕೇಸ್ ದಾಖಲಿಸಿದೆ.
ತೀವ್ರ ಡೀಕೆಗೆ ಗುರಿಯಾದ ಬಳಿಕ ಡಿಎಂಕೆ ನೇತೃತ್ವದ ಸರ್ಕಾರ ಅಜಿತ್ ಕುಮಾರ್ ಲಾಕಪ್ ಡೆತ್ ಕೇಸ್ ನ್ನು ಸಿಬಿಐಗೆ ವಹಿಸಿದ್ದು, ಈ ಹಿನ್ನೆಲೆಯಲ್ಲು ಪ್ರಕರಣದ ತನಿಖೆ ಕೈಗೊಂಡಿರುವ ಸಿಬಿಐ ಪೊಲೀಸರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 103 ಅಡಿಯಲ್ಲಿ ಕೊಲೆ ಕೇಸ್ ದಾಖಲಿಸಿದೆ.
ಅಜಿತ್ ಕುಮಾರ್ ತಮಿಳುನಾಡಿನ ಶಿವಗಂಗಾ ಜಿಲ್ಲೆಯ ತಿರುಪುವಣಂನಲ್ಲಿರುವ ಮಾದಾಪುರಂ ಭದ್ರಕಾಳಿಯಮ್ಮನ್ ದೇವಸ್ಥಾನದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ದೇವಸ್ಥಾನಕ್ಕೆ ಬಂದಿದ್ದ ತಾಯಿ-ಮಗಳು, ತಮ್ಮ ಕಾರಿನಲ್ಲಿದ್ದ 10 ಪೌಂಡ್ ಚಿನ್ನ ಕಾಣೆಯಾಗಿದೆ ಎಂದು ದೂರಿದ್ದರು. ಕಳ್ಳತನದಲ್ಲಿ ಅಜಿತ್ ಕುಮಾರ್ ಪಾತ್ರವಿದೆಯೇ ಎಂದು ಪರಿಶೀಲಿಸಲು ಅಜಿತ್ ಕುಮಾರ್ ನನ್ನು ವಶಕ್ಕೆ ಪಡೆದ ಪೊಲೀಸರ ತಂಡ ಚಿತ್ರಹಿಂಸೆ ನೀಡಿತ್ತು. ಗಂಭೀರವಾಗಿ ಹಲ್ಲೆಗೊಳಗಾದ ಅಜಿತ್ ಕುಮಾರ್ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಲಾಕಪ್ ಡೆತ್ ದಾಖಲಾಗಿದೆ.