ಬಳ್ಳಾರಿ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ FDA ನೌಕರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಸುಂಕಪ್ಪ ಕೊರವರ (45) ಮೃತ ನೌಕರ. ಶಿಕ್ಷಣ ಇಲಾಖೆ ಎಫ್ ಡಿಎ ಸುಂಕಪ್ಪ, ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಕಳೆದ ೭ ತಿಂಗಳಿಂದ ಕರ್ತವ್ಯಕ್ಕೆ ಗೈರಾಗಿದ್ದ. ಹಾಗಾಗಿ ವೇತನ ಪಾವತಿ ಮಾಡಿರಲಿಲ್ಲ. ಮದ್ಯ ವ್ಯಸನಿಯಾಗಿದ್ದ ಸಂಕುಪ್ಪ ಜೀವನ ನಿರ್ವಹಣೆ ಕಷ್ಟವಗಿತ್ತು. ಜುಲೈ 8 ರಂದು ವೇತನ ಕೇಳಲೆಂದು ಬಿಇಓ ಕಚೇರಿ ಬಳಿ ಬಂದ ಸುಂಕಪ್ಪ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.
ಶೇ.೮೦ರಷ್ಟು ಸುಟ್ಟಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಎರಡು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.