HomeLatest Newsನಮ್ಮ ಪಕ್ಷದ 55 ಶಾಸಕರನ್ನು ಟಾರ್ಗೆಟ್ ಮಾಡಿದ ವಿಚಾರ ನನಗೆ ಗೊತ್ತಿಲ್ಲ: ಸಚಿವ ಸಂತೋಷ್ ಲಾಡ್

ನಮ್ಮ ಪಕ್ಷದ 55 ಶಾಸಕರನ್ನು ಟಾರ್ಗೆಟ್ ಮಾಡಿದ ವಿಚಾರ ನನಗೆ ಗೊತ್ತಿಲ್ಲ: ಸಚಿವ ಸಂತೋಷ್ ಲಾಡ್

ದಾವಣಗೆರೆ: ಕಾಂಗ್ರೆಸ್ ಪಕ್ಷದ 55 ಶಾಸಕರನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಶಾಸಕ ಕಾಶಪ್ಪನವರ್ ಹೇಳಿಕೆಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ನಮ್ಮ ಶಾಸಕರನ್ನು ಟಾರ್ಗೆಟ್ ಮಾಡಿದ ವಿಚಾರ ನನಗೆ ಗೊತ್ತಿಲ್ಲ. ಶಾಸಕ ಕಾಶಪ್ಪನವರ್ ಹೇಳಿದ್ದಾರೆ ಎಂದರೆ ಅವರಿಗೆ ಗೊತ್ತಿರಬೇಕು. ಆ ವಿಚಾರ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಸಂತೋಷ್ ಲಾಡ್ ಪುನರುಚ್ಚರಿಸಿದ್ದಾರೆ. ಯಾರೇ ಮುಖ್ಯಮಂತ್ರಿಯಾದರೂ ಶಾಸಕರ ಬೆಂಬಲದಿಂದಲೇ ಆಗುತ್ತಾರೆ. ಈಗ ಮುಖ್ಯಮಂತ್ರಿ ಅವರೇ ಬದಲಾವಣೆ ಇಲ್ಲವೆಂದು ಹೇಳಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular