ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ತಡೆಗೋಡೆಗೆ ಕಾರ್ ಡಿಕ್ಕಿಯಾಗಿ 3 ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರ್ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ರಾಮನಗರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.