BREAKING: ಬಾಲಕಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಉದ್ಯಮಿ ಅರೆಸ್ಟ್

ಮಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಉದ್ಯಮಿಯನ್ನು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಕರೆದೊಯ್ದು ಉದ್ಯಮಿ ಕೃತ್ಯವೆಸಗಿದ ಆರೋಪ ಕೇಳಿ ಬಂದಿದೆ. ಸಂತ್ರಸ್ತೆ ತಾಯಿಯ ದೂರು ಆಧರಿಸಿ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಕಳೆದ ಎರಡು ತಿಂಗಳಿನಿಂದ ಉದ್ಯಮಿ ತನ್ನ ಕಾರ್ ನಲ್ಲಿ ಬಾಲಕಿಯನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ. ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡಿರುವ ಮುಲ್ಕಿ ಠಾಣೆ ಪೊಲೀಸರು ತನಿಖೆ ನಡೆಸಿ 68 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಧಿಕಾ ರಕ್ತದೊತ್ತಡಕ್ಕೆ ಒಳಗಾಗಿದ್ದರಿಂದ ಮುಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read