ಬೆಂಗಳೂರು: ಸಿನಿಮಾ ಹಾಡಿಗೆ ಹೆಚ್ಚೆ ಹಾಕಿತ್ತಿದಾಗಲೇ ಏಕಾಏಕಿ ಕುಸಿದು ಬಿದ್ದ ಸೇಲ್ಸ್ ಎಕ್ಸಿಕ್ಯೂಟಿವ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರಾಯಚೂರು ಮೂಲದ ಲಿಂಗಸಗೂರು ತಾಲೂಕಿನ ಸರ್ಜಾಪುರ ಗ್ರಾಮದ ಬಸವರಾಜ್ (46) ಮೃತ ದುರ್ದೈವಿ. ಖಾಸಗಿ ಕಂಪನಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಕ್ಕಳೊಂದಿಗೆ ವಾಸವಾಗಿದ್ದರು.
ಬಸವರಾಜ್ ಕಂಪನಿಯ ಸ್ನೇಹಿತರೊಂದಿಗೆ ರೆಸಾರ್ಟ್ ಗೆ ಹೋಗಿದ್ದಾಗ ಸಿನಿಮಾ ಹಾಡಿಗೆ ಹೆಜ್ಜೆ ಹಾಕುತ್ತಾ ಡಾನ್ಸ್ ಮಾಡುತ್ತಿದ್ದರು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.