ಚೆನ್ನೈ: ಚೆನ್ನೈನಿಂದ ಬೆಂಗಳೂರಿಗೆ ತೈಲ ಸಾಗಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ತಮಿಳುನಾಡಿನ ತಿರುವಳ್ಳುರು ರೈಲು ನಿಲ್ದಾಣದ ಬಳಿ ನಡೆದಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಂದೇ ಭಾರತ್ ರೈಲು ಸೇರಿದಂತೆ ಹಲವು ರೈಲು ಸಂಚಾರ ರದ್ದಾಗಿದೆ.
ಸರಕು ಸಾಗಣೆ ರೈಲಿನ ಮೂರು ಬೋಗಿಗಳು ಹಳಿ ತಪ್ಪ್ಪಿವೆ. ಇದರಿಂದಾಗಿ ಇಂಧನ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಮುನ್ನೆಚ್ಚರಿಕೆ ಹಾಗೂ ಸುರಕ್ಷಿತಾ ಕ್ರಮವಾಗಿ ಸುಮಾರು 8 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿನ ಸ್ಥಳೀಯ ರೈಲು ಸೇವೆ ತತ್ಕಾಲಿಕವಾಗಿ ರದ್ದಾಗಿದೆ. ಬೆಂಗಳೂರು, ಮೈಸೂರು ಮತ್ತು ಕೊಯಮತ್ತೂರು ನಡುವೆ ಸಂಚರಿಸುವ ವಂದೇ ಭಾರತ್ ರೈಲು, ಶತಾಬ್ದಿ ಎಕ್ಸ್ ಪ್ರೆಸ್ ಸೇರಿದಂತೆ 8 ರೈಲುಗಳ ಸಂಚಾರ ರದ್ದಾಗಿದೆ.