HomeLatest NewsBREAKING: ರಸ್ತೆಯಲ್ಲಿ ಹೋಗುತ್ತಿದ್ದಾಗಲೇ ಬೀದಿ ನಾಯಿ ದಾಳಿ: ಬಾಲಕನಿಗೆ ಗಂಭೀರ ಗಾಯ

BREAKING: ರಸ್ತೆಯಲ್ಲಿ ಹೋಗುತ್ತಿದ್ದಾಗಲೇ ಬೀದಿ ನಾಯಿ ದಾಳಿ: ಬಾಲಕನಿಗೆ ಗಂಭೀರ ಗಾಯ

ಶಿವಮೊಗ್ಗ: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶಿವಮೊಗ್ಗದ ಸೋಮಿನಕೊಪ್ಪ ಬಡಾವಣೆಯಲ್ಲಿ ನಡೆದಿದೆ.

ಮಹಮ್ಮದ್ ತಸ್ಲೀಮ್ ಎಂಬುವರ ಪುತ್ರ 4 ವರ್ಷದ ಮೊಹಮ್ಮದ್ ತಮೀಮ್ ಗಾಯಗೊಂಡ ಬಾಲಕ ಎಂದು ಗುರುತಿಸಲಾಗಿದೆ.

ನಾಯಿ ದಾಳಿಯಿಂದ ಬಾಲಕನ ತುಟಿ ಭಾಗ ಬಳಿ ಗಂಭೀರ ಗಾಯವಾಗಿದೆ. ಆತನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಲಕನ ಮೇಲೆ ನಾಯಿ ದಾಳಿ ನಡೆಸಿದ ತಕ್ಷಣವೇ ಸುತ್ತಮುತ್ತಲಿನ ನಿವಾಸಿಗಳು ನಾಯಿಯನ್ನು ಓಡಿಸಿ, ಬಾಲಕನ ರಕ್ಷಣೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೋಮಿಕೊಪ್ಪ ಬಡಾವಣೆಯಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ. ತಕ್ಷಣವೇ ಪಾಲಿಕೆ ಆಡಳಿತ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular