ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರಿಗೆ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಸಾಥ್ ನೀಡಲಿದ್ದಾರೆ.
ಸಚಿವರಾದ ದಿನೇಶ್ ಗುಂಡುರಾವ್, ಹೆಚ್.ಸಿ. ಮಹದೇವಪ್ಪ ಇತರರು ಕೂಡ ಭಾಗವಹಿಸಲಿದ್ದಾರೆ. ಇಂಡಿ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ, ಸಚಿವರು ಭಾಗವಹಿಸಲಿದ್ದಾರೆ.
ಇಂದು ಬೆಂಗಳೂರಿನಿಂದ ಸೊಲ್ಲಾಪುರ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು ಸೊಲ್ಲಾಪುರ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಲಿದ್ದಾರೆ. ಕಾರ್ಯಕ್ರಮ ಮುಗಿಸಿ ಸಿಎಂ ಮತ್ತು ಡಿಸಿಎಂ ಹಾಗೂ ಸಚಿವರ ತಂಡ ಬೆಂಗಳೂರಿಗೆ ವಾಪಸ್ ಆಗಲಿದೆ.