HomeLatest NewsBREAKING : ಒಕ್ಕಲಿಗ ಸಂಪ್ರದಾಯದಂತೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಬಿ.ಸರೋಜಾದೇವಿ ಅಂತ್ರಕ್ರಿಯೆ.!

BREAKING : ಒಕ್ಕಲಿಗ ಸಂಪ್ರದಾಯದಂತೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಬಿ.ಸರೋಜಾದೇವಿ ಅಂತ್ರಕ್ರಿಯೆ.!

ಬೆಂಗಳೂರು : ಹಿರಿಯ ನಟಿ ಬಿ.ಸರೋಜಾದೇವಿ ಇಂದು ನಿಧನರಾಗಿದ್ದು, ಒಕ್ಕಲಿಗ ಸಂಪ್ರದಾಯದಂತೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಬಿ.ಸರೋಜಾದೇವಿ ಅಂತ್ರಕ್ರಿಯೆ ನೆರವೇರಲಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅವರ ನಿವಾಸದಲ್ಲಿ ಹಿರಿಯ ನಟಿ ಬಿ.ಸರೋಜಾ ದೇವಿ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಟಿ ಬಿ.ಸರೋಜಾ ದೇವಿ ನಿಧನಕ್ಕೆ ಹಲವು ಸ್ಟಾರ್ ನಟರು, ನಟಿಯರು ಕಂಬನಿ ಮಿಡಿದಿದ್ದಾರೆ.

ಬಿ. ಸರೋಜದೇವಿ ಕನ್ನಡದ ಹಿರಿಯ ಚಲನಚಿತ್ರತಾರೆಯರಲ್ಲಿ ಒಬ್ಬರು. ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ. ಕಿತ್ತೂರು ಚೆನ್ನಮ್ಮ ಚಿತ್ರದಲ್ಲಿ ಹೂಂಕರಿಸಿದ್ದ ಬಿ.ಸರೋಜಾದೇವಿ ಬಭ್ರುವಾಹನ ಚಿತ್ರದಲ್ಲಿ ಚಿತ್ರಾಂಗದೆಯಾಗಿದ್ದರು. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿ. ಅವರು ಏಳು ದಶಕಗಳಲ್ಲಿ ಸುಮಾರು ೨೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಆಕೆಯನ್ನು ಕನ್ನಡದಲ್ಲಿ “ಅಭಿನಯ ಸರಸ್ವತಿ” (ನಟನೆಯ ಸರಸ್ವತಿ) ಮತ್ತು ತಮಿಳಿನಲ್ಲಿ “ಕನ್ನಡತು ಪೈಂಗಿಲಿ” (ಕನ್ನಡದ ಗಿಳಿ) ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ. ಅವರು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular