BREAKING : ‘ಶಿರಾಡಿಘಾಟ್ ‘ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು, ತಪ್ಪಿದ ಭಾರಿ ದುರಂತ.!

ಹಾಸನ : ಶಿರಾಡಿಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಭಾರಿ ದುರಂತವೊಂದು ತಪ್ಪಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು ಮೂಲದ ಪ್ರವಾಸಿಗರಿದ್ದ ಕಾರು ಜಲಪಾತಕ್ಕೆ ಬಿದ್ದಿದೆ. ಪ್ರವಾಸಿಗರು ಫಾಲ್ಸ್ ವೀಕ್ಷಣೆಗಂತ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.

ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆ ಜಲಪಾತಗಳಿಗೆ ಜೀವಕಳೆ ಬಂದಿದೆ. ಶೃಂಗೇರಿಯ ಸಿರಿಮನೆ ಫಾಲ್ಸ್, ಶಿವಮೊಗ್ಗದ ಜೋಗ್ ಫಾಲ್ಸ್ ಸೇರಿದಂತೆ ಹಲವು ಫಾಲ್ಸ್ ಗಳು ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ಪ್ರವಾಸಿಗರು ಬಹಳ ಎಚ್ಚರಿಕೆಯಿಂದ ಇರಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read