BREAKING : ನಾಳೆ ಬೆಳಗ್ಗೆ 11 :30 ಕ್ಕೆ  ಹುಟ್ಟೂರು ದಶವಾರ ಗ್ರಾಮದಲ್ಲಿ ಹಿರಿಯ ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ |B.Saroja Devi Funeral

ಬೆಂಗಳೂರು : ಹಿರಿಯ ನಟಿ ಬಿ. ಸರೋಜಾದೇವಿ ನಿಧನರಾಗಿದ್ದು, ನಾಳೆ ಬೆಳಗ್ಗೆ 11 :30 ಕ್ಕೆ ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ನಾಳೆ ಬೆಳಗ್ಗೆ 11 :30 ಕ್ಕೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಒಕ್ಕಲಿಗ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ .ನಾಳೆವರೆಗೆ ಮಲ್ಲೇಶ್ವರಂನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬಿ.ಎಸ್ ಯಡಿಯೂರಪ್ಪ ಸಂತಾಪ

ಹಿರಿಯ ಕಲಾವಿದೆ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಪದ್ಮಭೂಷಣ ಬಿ.ಸರೋಜಾದೇವಿ ಅವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಕನ್ನಡ, ತಮಿಳು, ತೆಲುಗು ಹಿಂದಿ ಸೇರಿದಂತೆ ಹಲವಾರು ಭಾಷೆಗಳ 200ಕ್ಕೂ ಅಧಿಕ ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ಅವರ ನಿಧನದಿಂದ ಭಾರತೀಯ ಚಿತ್ರರಂಗ ತನ್ನ ಮಾತೃಸ್ವರೂಪಿ ಕಲಾವಿದೆಯನ್ನು ಕಳೆದುಕೊಂಡಂತಾಗಿದೆ. ಅವರ ಅಭಿನಯದ ಕಿತ್ತೂರು ಚೆನ್ನಮ್ಮ, ಭಕ್ತ ಕನಕದಾಸ, ಕಸ್ತೂರಿ ನಿವಾಸ ಮೊದಲಾದ ಅನೇಕ ಸ್ಮರಣೀಯ ಚಿತ್ರಗಳು ಅವರ ಕಲಾವಂತಿಕೆಯನ್ನು ಶಾಶ್ವತವಾಗಿರಿಸಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ದೇವರು ಅವರ ಕುಟುಂಬದವರಿಗೆ, ಅವರ ಅಪಾರ ಅಭಿಮಾನಿಗಳಿಗೆ ಆ ಹಿರಿಯ ಕಲಾವಿದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.

ಬಿ.ವೈ ವಿಜಯೇಂದ್ರ ಸಂತಾಪ

ಕನ್ನಡಿಗರ ಹೆಮ್ಮೆಯ ಬಹುಭಾಷಾ ನಟಿ ಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಅವರ ನಿಧನಕ್ಕೆ ಸಂತಾಪ ಕೋರುವೆ.ಪದ್ಮಶ್ರೀ, ಪದ್ಮಭೂಷಣ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಬಾಜನರಾಗಿದ್ದ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಮೇರು ನಟರಾದ ರಾಜ್ಕುಮಾರ್, ಕಲ್ಯಾಣ್ ಕುಮಾರ್ ಮೊದಲಾದ ನಟರೊಂದಿಗೆ ಅಭಿನಯಿಸಿ ಕನ್ನಡ ಚಿತ್ರರಂಗವಷ್ಟೇ ಅಲ್ಲದೇ ಬಹುಭಾಷಾ ನಟಿಯಾಗಿ ಕಲಾರಂಗಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ. ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಬಬ್ರುವಾಹನ ಕಥಾಸಂಗಮ ಸೇರಿದಂತೆ ಬಹು ಭಾಷೆಗಳ ಸಿನಿಮಾಗಳಲ್ಲಿನ ಅವರ ನಟನೆ ಕಲಾಭಿಮಾನಿಗಳಲ್ಲಿ ಶಾಶ್ವತವಾಗಿರಲಿದೆ.

ಸರೋಜಾ ದೇವಿ ಅವರ ಅಗಲಿಕೆಯ ನೋವಿನಲ್ಲಿರುವ ಅವರ ಕುಟುಂಬ ವರ್ಗ ಹಾಗೂ ಅವರ ಅಪಾರ ಅಭಿಮಾನಿಗಳ ದುಃಖದಲ್ಲಿ ನಾವೂ ಸಹ ಭಾಗಿಯಾಗಿದ್ದೇವೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read