BIG NEWS : ಶಕ್ತಿ ಯೋಜನೆಯ 500 ನೇ ಕೋಟಿ ಮಹಿಳೆಗೆ ಪಿಂಕ್ ಟಿಕೆಟ್ ಕೊಟ್ಟು ಸನ್ಮಾನಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಮಾಡಿರುವ ಸಂಭ್ರಮದ ಅಂಗವಾಗಿ ಇಂದು ಸಾಂಕೇತಿಕವಾಗಿ 500 ಕೋಟಿ ಸಾಧನೆಯ ಉಚಿತ ಟಿಕೇಟನ್ನು ಸಿಎಂ ಸಿದ್ದರಾಮಯ್ಯ ವಿತರಿಸಿದರು.

ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಮಾಡಿರುವ ಸಂಭ್ರಮದ ಅಂಗವಾಗಿ ಇಂದು ಸಾಂಕೇತಿಕವಾಗಿ 500 ಕೋಟಿ ಸಾಧನೆಯ ಉಚಿತ ಟಿಕೇಟನ್ನು ವಿತರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನಾಡಿನ ಹೆಣ್ಣುಮಕ್ಕಳು ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗೆ ಕುಟುಂಬದ ಯಜಮಾನನ ಮೇಲೆ ಅವಲಂಬಿತರಾಗದೆ ಸ್ವತಂತ್ರ ನಿರ್ಣಯ ಕೈಗೊಂಡು ಸ್ವಾವಲಂಬಿ ಬದುಕಿನೆಡೆಗೆ ಪಯಣಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಇದು ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಗ್ಗೆ ಹೆಮ್ಮೆಯಿದೆ. ಶಕ್ತಿ ರಾಜ್ಯದ ಲಕ್ಷಾಂತರ ಮಹಿಳೆಯರ ಕನಸುಗಳನ್ನು ನನಸಾಗಿಸಿ, ನಿಜಾರ್ಥದಲ್ಲಿ ಅವರ ಬದುಕಿಗೆ ಶಕ್ತಿ ತುಂಬಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳಾಗಿಸುವ ಉದ್ದೇಶದಿಂದ ಜಾರಿಗೊಳಿಸಿದ ಶಕ್ತಿ ಯೋಜನೆಯು ನಿರೀಕ್ಷೆಗೂ ಮೀರಿ ಅರ್ಹರನ್ನು ತಲುಪುತ್ತಿರುವುದು ಗ್ಯಾರಂಟಿ ಯೋಜನೆಯೊಂದರ ಯಶಸ್ಸಿಗೆ ಹಿಡಿದ ಕೈಗನ್ನಡಿ. ‘ಶಕ್ತಿʼಜಾರಿಯಾದ ನಂತರದಿಂದ ಈವರೆಗೆ 500 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಗಳಲ್ಲಿ ಪ್ರಯಾಣ ಮಾಡಿದ್ದು, ಈವರೆಗಿನ ಒಟ್ಟು ಟಿಕೆಟ್ ಮೌಲ್ಯ 12 ಸಾವಿರ ಕೋಟಿ ರೂ. ದಾಟಿದೆ. ಶಾಲಾ ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳು, ಕೆಲಸಕ್ಕೆ ತೆರಳುವ ಮಹಿಳೆಯರು, ದೇವಸ್ಥಾನ ಸೇರಿದಂತೆ ಮುಂತಾದ ಪ್ರವಾಸಿ ತಾಣಗಳಿಗೆ ತೆರಳುವ ತಾಯಂದಿರ ಮೊಗದಲ್ಲಿ ನೆಮ್ಮದಿಯ ಮಂದಹಾಸ ಮೂಡಿದ್ದು, ನಮ್ಮ ಯೋಜನೆಯ ಉದ್ದೇಶ ಈಡೇರುತ್ತಿರುವುದರ ಬಗ್ಗೆ ಸಂತಸವಾಗುತ್ತಿದೆ. ಕರ್ನಾಟಕದಲ್ಲಿ ಮಹಿಳಾ ಸಬಲೀಕರಣ ಎನ್ನುವುದು ಬರೀ ಬಾಯಿಮಾತಾಗದೇ, ನಿಜಾರ್ಥದಲ್ಲಿ ಅನುಷ್ಠಾನಗೊಂಡಿರುವುದು ನನ್ನಲ್ಲಿ ಸಾರ್ಥಕ್ಯ ಭಾವನೆ ಮೂಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read