ವಿಜಯಪುರ : ವಿಜಯಪುರ ನಗರದಲ್ಲಿ ಮತ್ತೆ ನೆತ್ತರು ಹರಿದಿದ್ದು., ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ವಿಜಯಪುರದ ಅಮರವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ.
ಸುಶೀಲ್ ಕಾಳೆ ಎಂಬುವವರ ಮೇಲೆ ದಾಳಿ ಮಾಡಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಗಾಯಗೊಂಡ ಸುಶೀಲ್ ಕಾಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಘಟನಾ ಸ್ಥಳಕ್ಕೆ ಗಾಂಧಿ ಚೌಕ್ ಪೊಲೀಸರು ಭೇಟಿ ನೀಡಿ ಪರಿಶೀaಲನೆ ನಡೆಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.