ಬೆಂಗಳೂರು : ಡ್ರಗ್ಸ್ ಸಾಗಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಲಿಂಗರಾಜ ಕಣ್ಣಿ’ ಯನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ.
ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕಾಂಗ್ರೆಸ್ ಮುಖಂಡ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಕಣ್ಣಿ ಅವರನ್ನು ಮಹಾರಾಷ್ಟ್ರದ ಥಾಣೆ ನಗರದಲ್ಲಿ ಬಂಧಿಸಲಾಗಿತ್ತು. . ಈ ಬೆನ್ನಲ್ಲೇ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ‘ಲಿಂಗರಾಜ ಕಣ್ಣಿ’ ಉಚ್ಚಾಟನೆ ಮಾಡಲಾಗಿದೆ. ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಈ ಆದೇಶ ಹೊರಡಿಸಿದ್ದಾರೆ.
ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಆಪ್ತರಾಗಿರುವ ಲಿಂಗರಾಜ ಕಣ್ಣಿ ಡ್ರಗ್ಸ್ ಮಾರಾಟ ಮಾಡುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮಹಾರಾಷ್ಟ್ರದ ಕಲ್ಯಾಣ ಠಾಣೆ ಪೋಲೀಸರು ಲಿಂಗರಾಜ ಬಳಿ ಇದ್ದ ನಿಷೇಧಿತ 120 ಕೊಡೆನೈನ್ ಸಿರಪ್ ಬಾಟಲಿಯನ್ನು ವಶಕ್ಕೆ ಪಡೆದುಕೊಂಡಿದ್ದರು. ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
TAGGED:ಡ್ರಗ್ಸ್ ಸಾಗಾಟ