BREAKING : ರಾಜ್ಯದ ಅತಿ ಉದ್ದದ ‘ಸಿಗಂದೂರು ಸೇತುವೆ ‘ಲೋಕಾರ್ಪಣೆಗೊಳಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಶಿವಮೊಗ್ಗ :  ರಾಜ್ಯದ ಅತಿ ಉದ್ದದ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸೇತುವೆ ಲೋಕಾರ್ಪಣೆಗೊಳಿಸಿದ್ದಾರೆ. ಈ ಮೂಲಕ ಶರಾವತಿ ಭಾಗದ ಜನರ ದಶಕಗಳ ಕನಸು ನನಸಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇರುವ ಪ್ರಸಿದ್ಧ ಯಾತ್ರಾಸ್ಥಳ ಸಿಗಂದೂರು ಸೇತುವೆಗೆ ಇಂದು ಚಾಲನೆ ಸಿಕ್ಕಿದೆ.  ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇತುವೆ ಲೋಕಾರ್ಪಣೆಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ಮತ್ತಿತರರಿದ್ದರು.

 ಬರೋಬ್ಬರಿ 470 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ದೇಶದ 2 ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆ ಇದಾಗಿದೆ. ಈ ಸೇತುವೆಯ ಕಾಮಗಾರಿ 2020 ರ ಡಿಸೆಂಬರ್ ನಲ್ಲಿ ಆರಂಭವಾಗಿತ್ತು. ಸಿಗಂದೂರು ಸೇತುವೆ 2.44 ಕಿ.ಮೀ. ಉದ್ದವಿದೆ. ಇದರಲ್ಲಿ 740 ಮೀಟರ್ ಮಾತ್ರ ಕೇಬಲ್ ಸೇತುವೆ ಇದೆ. 30ರಿಂದ 55 ಮೀಟರ್ ಎತ್ತರದ 17 ಪಿಲ್ಲರ್ಗಳಿವೆ. ಇದು ದ್ವಿಪಥ ಹೊಂದಿದ್ದು, 2 ಕಡೆ 1.5 ಮೀಟರ್ ಅಗಲದ ಪುಟ್ಪಾತ್ ಕೂಡ ಇದೆ. ಸೇತುವೆ ನಿರ್ಮಾಣಕ್ಕೆ 423.15 ಕೋಟಿ ರೂ. ವೆಚ್ಚವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read