ಚಾಮರಾಜನಗರ: ಬಹಿರ್ದೆಸೆಗೆ ತೆರಳಿದ್ದ ವೇಳೆಯಲ್ಲಿ ಕರಡಿ ದಾಳಿ ಮಾಡಿದ್ದು, ವ್ಯಕ್ತಿ ಸಾವನ್ನಪ್ಪಿದ ಘಟನೆ ಬಿಳಿಗಿರಿರಂಗನ ಬೆಟ್ಟದ ಯರಕನಗದ್ದೆಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಯರಕನಗದ್ದೆ ಕಾಲೋನಿ ನಿವಾಸಿ ಸಿದ್ದ ಕರಡಿ ದಾಳಿಗೆ ಬಲಿಯಾದ ವ್ಯಕ್ತಿ ಎಂದು ಹೇಳಲಾಗಿದೆ. ಬಹಿರ್ದೆಸೆಗೆ ತೆರಳಿದ್ದಾಗ ಕರಡಿ ದಾಳಿ ಮಾಡಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸಿದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.